ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ನಾಮಫಲಕ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು
ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ನಾಮಫಲಕ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು.
ಪ್ರೊ. ಬಿ. ಕೃಷ್ಣಪ್ಪನವರ ಆಶಯದಂತೆ ಸಮಿತಿ ಜಿಲ್ಲಾ ಮತ್ತು ತಾಲೂಕು ಹಾಗು ಗ್ರಾಮ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮಹಿಳಾ ಘಟಕ ಸಹ ಮುಂಚೂಣಿಗೆ ಬಂದಿದೆ.
ಕಾರ್ಯಕ್ರಮದಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ, ತಾಲೂಕು ಸಂಚಾಲಕ ಕೆ. ರಂಗನಾಥ್, ಜಿಲ್ಲಾ ಸಂಘಟನಾ ಸಂಚಾಲಕ ಈಶ್ವರಪ್ಪ, ಜಿಲ್ಲಾ ಸಮಿತಿ ಸದಸ್ಯ ಶಿವಶಂಕರ್, ತಾಲೂಕು ನಗರ ಸಂಚಾಲಕ ಪ್ರಸನ್ನ, ದಲಿತ ಮಹಿಳಾ ಒಕ್ಕೂಟದ ಶಾಂತಿ ಸೇರಿದಂತೆ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು, ಮಹಿಳಾ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ