ಭದ್ರಾವತಿ ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ ವತಿಯಿಂದ ಶಾಲೆಯ ಆವರಣದಲ್ಲಿ ವಿಐಎಸ್‌ಎಲ್ ಎಥಿಕ್ಸ್ ಕ್ಲಬ್ ಸಹಯೋಗದೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಭದ್ರಾವತಿ: ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ ವತಿಯಿಂದ ಶಾಲೆಯ ಆವರಣದಲ್ಲಿ ವಿಐಎಸ್‌ಎಲ್ ಎಥಿಕ್ಸ್ ಕ್ಲಬ್ ಸಹಯೋಗದೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು.
ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿ.ಐ.ಎಸ್.ಎಲ್ ಕಾರ್ಖಾನೆ ನಗರಾಡಳಿತ ಇಲಾಖೆ ವ್ಯವಸ್ಥಾಪಕ ಮೋಹನ್ ರಾಜ್ ಶೆಟ್ಟಿ, ವಿಐಎಸ್‌ಎಲ್ ಆಸ್ಪತ್ರೆ ಹಾಗು ಸುರಕ್ಷತೆ ವಿಭಾಗದ ವ್ಯವಸ್ಥಾಪಕ ಬಿ. ರಘುನಾಥ್, ಸುರಕ್ಷತೆ ವಿಭಾಗದ ಉಪ ವ್ಯವಸ್ಥಾಪಕ ಎಲ್. ಕುತ್ತಲನಾಥನ್, ಸಹಾಯಕ ವ್ಯವಸ್ಥಾಪಕ ಉಮೇಶ್ ಮಧುಕರ್ ಉಕ್ಕೆ ಸೇರಿದಂತೆ ಇನ್ನಿತರರು ವಿವಿಧ ಔಷಧೀಯ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ವೇಣುಗೋಪಾಲ್, ಮುಖ್ಯ ಶಿಕ್ಷಕ ಕೆ. ಕಲ್ಲೇಶ್ ಕುಮಾರ್, ಉಪಮುಖ್ಯ ಶಿಕ್ಷಕಿಯರಾದ ಸುನಿತಾ ಹಾಗೂ ತನುಜಾ ಅನಿಲ್ ಕುಮಾರ್ ಹಾಗೂ ಅನನ್ಯ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ರಾಧಿಕಾ ನಿರೂಪಿಸಿ, ಸಂಗೀತ ಸ್ವಾಗತಿಸಿದರು ಹಾಗೂ ಅಶ್ವಿನಿ ವಂದಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ