ಭದ್ರಾವತಿ ಪೇಪರ್‌ಟೌನ್ ಪೊಲೀಸ್ ಠಾಣೆ ವತಿಯಿಂದ ಬಾಳೆಮಾರನಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ: ಪೇಪರ್‌ಟೌನ್ ಪೊಲೀಸ್ ಠಾಣೆ ವತಿಯಿಂದ ಬಾಳೆಮಾರನಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಾಲೆಯ ಸಿ.ವಿ ರಾಮನ್ ಇಕೋ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೋಕ್ಸೋ ಕಾಯ್ದೆ, ೧೧೨ ತುರ್ತು ಸಹಾಯವಾಣಿ, ಸಾಮಾಜಿಕ ಜಾಲತಾಣದ ಸುರಕ್ಷಿತ ಬಳಕೆ, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿ ನೀಡಲಾಯಿತು.
ಠಾಣೆಯ ಪೊಲೀಸ್ ನಿರೀಕ್ಷಕಿ ನಾಗಮ್ಮ ಹಾಗು ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ಶಿಕ್ಷಕ ವರ್ಗದವರು ಸೇರಿದಂತೆ ಇನ್ನಿರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ