ಶುಕ್ರವಾರ, ಮೇ 31, 2024

ವಿಶ್ವ ತಂಬಾಕು ರಹಿತ ದಿನಾಚರಣೆ : ಗುಲಾಬಿ ಆಂದೋಲನ, ಜಾಥಾ ಕಾರ್ಯಕ್ರಮ

ಕೋಟ್ಪಾಕಾಯ್ದೆ ಜಾರಿಯಲ್ಲಿದ್ದರೂ ತಂಬಾಕು ಉತ್ಪನ್ನಗಳ ಸೇವನೆ ಹೆಚ್ಚಳ : ನ್ಯಾ. ಸಿ.ಎನ್ ಲೋಕೇಶ್ ಆತಂಕ

ಭದ್ರಾವತಿ: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ವಕೀಲರ ಸಂಘ, ಅಭಿ ಯೋಜನೆ  ಇಲಾಖೆ, ರೋಟರಿ ಕ್ಲಬ್ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜ್ ವತಿಯಿಂದ ಶುಕ್ರವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಗುಲಾಬಿ ಆಂದೋಲನ ಹಾಗೂ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ವಕೀಲರ ಸಂಘ, ಅಭಿ ಯೋಜನೆ  ಇಲಾಖೆ, ರೋಟರಿ ಕ್ಲಬ್ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜ್ ವತಿಯಿಂದ ಶುಕ್ರವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಗುಲಾಬಿ ಆಂದೋಲನ ಹಾಗೂ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಸಿ.ಎನ್ ಲೋಕೇಶ್ ಕಾರ್ಯಕ್ರಮ ಉದ್ಘಾಟಿಸಿದರು.
    ಕೋಟ್ಪಾಕಾಯ್ದೆ ಜಾರಿಯಲ್ಲಿದ್ದರೂ ಸಹ ತಂಬಾಕು ಉತ್ಪನ್ನಗಳ ಸೇವನೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಕುರಿತು ಜಾಗೃತಿ ಮೂಡಿಸುವಲ್ಲಿ ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.
      ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಂಕರಪ್ಪ  ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
    ತಂಬಾಕಿನಲ್ಲಿ ೭೦೦೦ ವಿಷ ಪದಾರ್ಥಗಳು ಹಾಗೂ ೩೦೦೦ ಕ್ಯಾನ್ಸರ್ ಕಾರಕ ಪದಾರ್ಥಗಳು ಇದ್ದು, ತಂಬಾಕು ಸೇವನೆಯಿಂದ ಮುಕ್ತಿ ಹೊಂದಲು ಇಚ್ಚಿಸುವವರಿಗಾಗಿ ತಂಬಾಕು ವ್ಯಸನ ಮುಕ್ತ ಕೇಂದ್ರ ತೆರೆಯಲಾಗಿದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
     ಪೊಲೀಸ್ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ  ಕೋಟ್ಪಾ ಕಾಯ್ದೆಯಡಿ ದಾಳಿಗಳನ್ನು ನಡೆಸುತ್ತಿದ್ದು, ಎಲ್ಲಾ ಅಂಗಡಿ ಮುಂಗ್ಗಟ್ಟುಗಳಿಗೆ ಭೇಟಿ ನೀಡಿ ಕೋಟ್ಪಾ ಕಾಯಿದೆ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.
    ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಾ ಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿ, ಆಕರ್ಷಣೆ ಹಾಗೂ ವಿವಿಧ ಕಾರಣಗಳಿಂದ ಪ್ರಾರಂಭವಾದ ಚಟ ಕ್ಯಾನ್ಸರ್ ನಂತಹ ಕಾಯಿಲೆಗೆ ಕಾರಣವಾಗುತ್ತದೆ ಎಂದರು.
    ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ, ಉಮೇಶ್, ವಕೀಲರಾದ ಶ್ವೇತಾ, ನಾಗರಾಜ್, ವೈದ್ಯರಾದ ಡಾ. ಮಯೂರಿ, ರಶ್ಮಿ, ರೋಟರಿ ಕ್ಲಬ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಜ್ಯೋತಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ವರ್ಗದವರು, ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಆನಂದ ಮೂರ್ತಿ ಸ್ವಾಗತಿಸಿ, ಅಂಕಿತ ವಂದಿಸಿದರು.

ದೇವಸ್ಥಾನ ಬೀಗ ಮುರಿದು ಚಿನ್ನಾಭರಣ, ಹುಂಡಿ ಹಣ ಕಳ್ಳತನ

    ಭದ್ರಾವತಿ: ತಾಲೂಕಿನ ತಾಷ್ಕೆಂಟ್ ನಗರದ ಶ್ರೀ ಕೆರೆ ಏರಿ ಚೌಡೇಶ್ವರಿ ದೇವಸ್ಥಾನದ ಬೀಗ ಮುರಿದು ದೇವರ ಚಿನ್ನಾಭರಣ ಹಾಗು ಹುಂಡಿ ಹಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
    ದೇವಸ್ಥಾನದ ಅರ್ಚಕರು ಮೇ.೨೭ರ ಸಂಜೆ ೬.೩೦ರ ಸಮಯದಲ್ಲಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದು, ಮಾರನೇ ದಿನ ಬಂದು ನೋಡಿದಾಗ ದೇವಸ್ಥಾನದ ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಹುಂಡಿಯಲ್ಲಿದ್ದ ಅಂದಾಜು ಸುಮಾರು ೪೦ ಸಾವಿರ ರು. ಕಾಣಿಕೆ ಹಣ ಹಾಗು ೭೫ ಗ್ರಾಂ ತೂಕದ ಬೆಳ್ಳಿಯ ಮತ್ತು ೧೦ ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ತಿಳಿದು ಬಂದಿದೆ.
    ಈ ಸಂಬಂಧ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಪಿ ಲಿಂಗೇಶ್ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  

ಗುರುವಾರ, ಮೇ 30, 2024

ಯೆನೆಪೋಯ ಆರೋಗ್ಯ ಕೇಂದ್ರ ಕಾರ್ಯಾರಂಭ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿ ಗುರುವಾರದಿಂದ ನೂತನವಾಗಿ ಯೆನೆಪೋಯ ಆರೋಗ್ಯ ಕೇಂದ್ರ ಕಾರ್ಯಾರಂಭಗೊಂಡಿತು. 

    ಭದ್ರಾವತಿ: ನಗರದ ಹೊಸಸೇತುವೆ ರಸ್ತೆಯಲ್ಲಿ ಗುರುವಾರದಿಂದ ನೂತನವಾಗಿ ಯೆನೆಪೋಯ ಆರೋಗ್ಯ ಕೇಂದ್ರ ಕಾರ್ಯಾರಂಭಗೊಂಡಿದ್ದು, ಈಗಾಗಲೇ ರಾಜ್ಯದಾದ್ಯಂತ ಯೆನೆಪೋಯ ಆಸ್ಪತ್ರೆ ಶಾಖೆಗಳು ಜಿಲ್ಲೆ ಹಾಗು ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. 

ಆಸ್ಪತ್ರೆವತಿಯಿಂದ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಹಲವು ವೈದ್ಯಕೀಯ ಸೇವೆಗಳನ್ನು ಕಲ್ಪಿಸಿಕೊಡಲಾಗಿದ್ದು, ಇದೀಗ ನಗರದಲ್ಲಿ ಆರೋಗ್ಯ ಕೇಂದ್ರ ಕಾರ್ಯಾರಂಭಗೊಂಡಿರುವುದು ಹೆಚ್ಚಿನ ಅನುಕೂಲವಾಗಿದೆ. 

ಯೆನೆಪೋಯ ಆಸ್ಪತ್ರೆ ಮಂಗಳೂರು ಕೇಂದ್ರ ಶಾಖೆಯ ಮಾರುಕಟ್ಟೆ ವ್ಯವಸ್ಥಾಪಕ ವಿಜಯಾನಂದ್, ತಾಲೂಕು ಶಾಖೆಯ ಆಶ್ರಫ್, ಅಬ್ದುಲ್, ಕೆವಿನ್ ಸಾಲೋಮನ್, ಸಂಯೋಜಕ ಫೈಜಾನ್, ಮುಖಂಡರಾದ ಫೀರ್ ಷರೀಫ್, ಸಿ.ಎಂ ಖಾದರ್, ಬಿ.ಎನ್ ರಾಜು, ಎನ್. ಮಂಜುನಾಥ್, ಚೌಕ್ ಮಸೀದಿ ಧರ್ಮಗುರು ಎಂ.ಡಿ ಗೌಸ್ ಸೇರಿದಂತೆ ವಿವಿಧ ಮಸೀದಿಗಳ ಧರ್ಮಗುರುಗಳು, ಸ್ವಯಂ ಸೇವಾ ಸಂಸ್ಥೆ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯ : ಬಿ.ವೈ ವಿಜಯೇಂದ್ರ

ಭದ್ರಾವತಿ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನೈರುತ್ಯ ಪದವಿಧರ ಹಾಗು ಶಿಕ್ಷಕರ ಕ್ಷೇತ್ರ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಉದ್ಘಾಟಿಸಿದರು. 

    ಭದ್ರಾವತಿ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಳೆದ 1 ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು. 

    ಅವರು ಗುರುವಾರ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಮತದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನೈರುತ್ಯ ಪದವಿಧರ ಹಾಗು ಶಿಕ್ಷಕರ ಕ್ಷೇತ್ರ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಿ ಮಾತನಾಡಿದರು. 

     ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರುವ ಉದ್ದೇಶದಿಂದ ಹೊಸ ಶಿಕ್ಷಣ ನೀತಿ ಅಸ್ತಿತ್ವಕ್ಕೆ ತಂದಿದೆ. ಆದರೆ ಕಾಂಗ್ರೆಸ್ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸದೆ ನಿರ್ಲಕ್ಷತನ ವಹಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವ ಜೊತೆಗೆ ಶಿಕ್ಷಕರ ವೇತನ ಹೆಚ್ಚಳ ಸೇರಿದಂತೆ ಬಹುತೇಕ ಸಮಸ್ಯೆಗಳಿಗೆ ಸ್ಪಂದಿಸಿದೆ ಎಂದರು. 

     ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡಿದೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮ ಸಹ ಹೆಚ್ಚಿನದ್ದಾಗಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಲಭಿಸಲಿದ್ದು, ಈ ಚುನಾವಣೆಯಲ್ಲೂ ಪಕ್ಷದ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಮತದಾರರು ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತö್ಯದ ಮತಗಳನ್ನು ನೀಡುವ ಮೂಲಕ ಗೆಲುವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. 

     ಪದವಿಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಪವಾರ್, ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಅಧ್ಯಕ್ಷ ಅತ್ತಿಗುಂದ ಧರ್ಮಕುಮಾರ್, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ವಿ. ಕದಿರೇಶ್, ಬಿ.ಕೆ ಶ್ರೀನಾಥ್, ಮಂಗೋಟೆ ರುದ್ರೇಶ್, ಜಿ. ಆನಂದ ಕುಮಾರ್, ಎಂ. ಮಂಜುನಾಥ್, ಬಿ.ಜೆ ರಾಮಲಿಂಗಯ್ಯ, ಎಸ್. ಚನ್ನೇಶ್, ಅಣ್ಣಪ್ಪ, ರಾಜಶೇಖರ ಉಪ್ಪಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

  ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಸಸ...